Wednesday, July 6, 2022

ಮಹಾರಾಷ್ಟ್ರದಲ್ಲಿ ರೆಬೆಲ್ಸ್​​ ಸಂಖ್ಯೆ 41ಕ್ಕೆ ಏರಿಕೆ : 20 ಶಾಸಕರ ಜೊತೆ ಸಂಪರ್ಕ ಎಂದ ರಾವತ್​

Follow Us

newsics.com

ಮಹಾರಾಷ್ಟ್ರ : ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್​ ಅಘಾಡಿ ಸರ್ಕಾರದಲ್ಲಿ ಆಂತರಿಕ ಭಿನ್ನಮತ ಸೃಷ್ಠಿಸಿರುವ ಶಿವಸೇನೆಯ ನಾಯಕ ಏಕನಾಥ್​ ಶಿಂಧೆ ಬಂಡಾಯದ ನಡುವೆಯೇ ಇನ್ನೂ ಮೂವರು ಶಿವಸೇನಾ ಶಾಸಕರು ಇಂದು ಬೆಳಗ್ಗೆ ಗುವಾಹಟಿಯ ರಾಡಿಸನ್​ ಬ್ಲೂ ಹೋಟೆಲ್​ಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಮೂಲಕ ಬಂಡಾಯ ಶಾಸಕರ ಸಂಖ್ಯೆ ಸಧ್ಯ 41ಕ್ಕೆ ಏರಿಕೆಯಾಗಿದೆ. ಈ ವಿಚಾರವಾಗಿ ಮಾತನಾಡಿದ ಶಿವಸೇನಾ ರಾಷ್ಟ್ರೀಯ ವಕ್ತಾರ ಸಂಜಯ್​ ರಾವತ್​, ನಾವು ಗುವಾಹಟಿಯಲ್ಲಿರುವ 20 ಶಾಸಕರ ಜೊತೆ ಸಂಪರ್ಕ ಹೊಂದಿದ್ದೇವೆ ಎಂದಿದ್ದಾರೆ.

ನಮ್ಮ ಪಕ್ಷವು ಬಲಶಾಲಿಯಾಗಿದೆ. 20 ಬಂಡಾಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಮುಂಬೈಗೆ ಆಗಮಿಸಿದ ಬಳಿಕ ಎಲ್ಲವೂ ತಿಳಿಯಾಗಲಿದೆ. ಶಾಸಕರಿಗೆ ಯಾವ ರೀತಿಯಲ್ಲಿ ಒತ್ತಡ ಹೇರಲಾಗುತ್ತಿದೆ ಎಂಬುದರ ಬಗ್ಗೆ ನಾವು ತಿಳಿದುಕೊಳ್ತಿದ್ದೇವೆ ಎಂದು ಹೇಳಿದ್ರು.

ಈ ಆಡಿನ ಮರಿಯ ಕಿವಿ 19 ಇಂಚು ಉದ್ದ!

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
- Advertisement -
error: Content is protected !!