NEWSICS.COM
ತಿರುವನಂತಪುರಂ: ಕೇರಳದ ರಾಜ್ಯದ ಅತ್ಯಂತ ಕಿರಿಯ ಮೇಯರ್ ಆಗಿ 21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಆಯ್ಕೆಯಾಗಿದ್ದಾರೆ. ಈ ಮೂಲಕ ತಿರುವನಂತಪುರಂನ ಹೊಸ ಮೇಯರ್ ಆಗಿ ಆರ್ಯ ಸೋಮವಾರ (ಡಿ.28) 54 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಮುದವನ್ಮುಗಲ್ ವಾರ್ಡ್ನ ಎಲ್ ಡಿಎಫ್ ಕೌನ್ಸಿಲರ್ ಆಗಿರುವ ಆರ್ಯ ತಿರುವನಂತಪುರಂ ಅನ್ನು ಮಾದರಿ ನಗರವನ್ನಾಗಿ ಮಾಡಲು ಶ್ರಮಿಸುತ್ತೇನೆ. ನಗರದ ಅಭಿವೃದ್ಧಿಗೆ ಯೋಜನೆಗಳನ್ನು ಪಾಲಿಕೆಯ ಸಹಕಾರದೊಂದಿಗೆ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಆರ್ಯ ಆಲ್ ಸೇಂಟ್ಸ್ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಾರೆ. ಬಾಲಾ ಸಂಘದ ರಾಜ್ಯಾಧ್ಯಕ್ಷೆ ಮತ್ತು ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಎಸ್ಎಫ್ಐನ ರಾಜ್ಯ ಪದಾಧಿಕಾರಿಯಾಗಿದ್ದು, ಸಿಪಿಎಂ ಶಾಖಾ ಸಮಿತಿ ಸದಸ್ಯೆಯೂ ಆಗಿದ್ದಾರೆ.
21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ತಿರುವನಂತಪುರಂ ಮುಂದಿನ ಮೇಯರ್!