newsics.com
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
ನಿನ್ನೆ ಆರ್ಯನ್ ಖಾನ್ ಎನ್ ಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಮುಂಬೈನ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರ್ಯನ್ ಸೇರಿ 7 ಆರೋಪಿಗಳನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತ್ತು. ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ.
ವಿಚಾರಣೆ ಇನ್ನೂ ಬಾಕಿ ಇದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೆ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡವಂತೆ ಎನ್ ಸಿಬಿ ಕೋರ್ಟ್ ಬಳಿ ಕೇಳಿತ್ತು.