newsics.com
ಡ್ರಗ್ ಸೇವನೆ ಪ್ರಕರಣದಲ್ಲಿ ಎನ್ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ಗೆ ಎನ್ಸಿಬಿಯಿಂದ ಕ್ಲೀನ್ಚಿಟ್ ದೊರಕಿದೆ. ಆರ್ಯನ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ಎನ್ಸಿಬಿ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದು ಇದರಲ್ಲಿ ದಾಳಿ ವೇಳೆ ಆರ್ಯನ್ ಬಳಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ ಎಂದು ಉಲ್ಲೇಖಿಸಲಾಗಿದೆ.
2021ರ ಅಕ್ಟೋಬರ್ 8ರಂದು ಆರ್ಯನ್ ಖಾನ್ರನ್ನು ಎನ್ಸಿಬಿ ಡ್ರಗ್ ಪಾರ್ಟಿ ಪ್ರಕರಣದಲ್ಲಿ ಬಂಧಿಸಿತ್ತು.