ಗುವಾಹಟಿ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಅಸ್ಸಾಂನಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆ ದೋರಿದೆ. ಬ್ರಹ್ಮಪುತ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟುಗಳ ಗೇಟ್ ಗಳನ್ನು ತೆರೆಯಲಾಗಿದ್ದು ಇದರಿಂದ ನದಿಗಳಿಗೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದುಬರುತ್ತಿದೆ.
ನದಿ ಪಾತ್ರದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವು ಪಡೆಯಲಾಗಿದೆ