Saturday, April 17, 2021

ಪಾಲ್ಗಾರ್ ಸಾಧುಗಳ ಹತ್ಯೆ; 7 ಪ್ರಮುಖ ಆರೋಪಿಗಳ ಸೆರೆ

ಮುಂಬೈ: ಮಹಾರಾಷ್ಟ್ರದ ಪಾಲ್ಗಾರ್ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ಏಳು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಧುಗಳ ಕೊಲೆ ಆರೋಪದ ಮೇಲೆ ಆರು ವ್ಯಕ್ತಿಗಳು ಹಾಗೂ ಒಬ್ಬ ಬಾಲಕನನ್ನು ಬಂಧಿಸಲಾಗಿದೆ ಎಂದು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅತುಲ್‌ಚಂದ್ರ ಕುಲಕರ್ಣಿ ಹೇಳಿದ್ದಾರೆ.
ಕಳೆದ ಏಪ್ರಿಲ್ 16 ರಂದು ಪಾಲ್ಗಾರ್ ನಲ್ಲಿ ಇಬ್ಬರು ಸಾಧುಗಳನ್ನು ಹಾಗೂ ಅವರನ್ನು ಕರೆದುಕೊಂಡು ಬಂದಿದ್ದ ಕಾರ್ ಡ್ರೈವರ್‌ನನ್ನು ಮಕ್ಕಳ ಕಳ್ಳರೆಂದು ಭಾವಿಸಿ ಹೊಡೆದು ಕೊಂದಿದ್ದರು.
ಗಲಭೆ ಸಂದರ್ಭದಲ್ಲಿ ಸಾಧುಗಳಾದ ಮಹಾಂತ್ ಕಲ್ಪವೃಕ್ಷಗಿರಿ, ಸುಶೀಲ್ ಗಿರಿ ಮಹಾರಾಜ್ ಹಾಗೂ ಚಾಲಕ ನಿತೇಶ್ ಹತ್ಯೆಯಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!