Tuesday, April 13, 2021

ವಿಮಾನದ ಬಾಗಿಲ ಬಳಿ ಮೃತಪಟ್ಟ ವಿದೇಶಿ ಮಹಿಳೆ

ಹೈದರಾಬಾದ್: ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿ ಸ್ವದೇಶಕ್ಕೆ ತೆರಳುತ್ತಿದ್ದ ವಿದೇಶಿ ಮಹಿಳೆಯೊಬ್ಬರು ವಿಮಾನ ಹತ್ತುವ ವೇಳೆ ಬಾಗಿಲ ಬಳಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು  ಸುಡಾನ್ ನ ಹಯೀದಾ ಮೊಹಮ್ಮದ್ ತಹಾ ಆಲಿ ಎಂದು ಗುರುತಿಸಲಾಗಿದೆ. ಅವರಿಗೆ 62 ವರ್ಷ ಪ್ರಾಯವಾಗಿತ್ತು.

ಕಳೆದ ಏಳು ತಿಂಗಳಿನಿಂದ ತಹಾ ಆಲಿ ಅವರು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸ್ ರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಲಾಕ್ ಡೌನ್ ನಿಂದಾಗಿ ತೆರಳಲು ಸಾಧ್ಯವಾಗಿರಲಿಲ್ಲ. ಇಂದು ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ ವಿಮಾನ ನಿಲ್ದಾಣಕ್ಕೆ ಗಾಲಿ ಕುರ್ಚಿಯಲ್ಲಿ ಆಗಮಿಸಿದ ಅವರು ಎಲ್ಲ ತಪಾಸಣೆ ಪೂರ್ತಿಗೊಳಿಸಿ ವಿಮಾನದ ಬಾಗಿಲ ಬಳಿ ಬಂದಿದ್ದರು. ಆ ಹೊತ್ತಿನಲ್ಲಿ ತಾಹಿರಾ ಅವರು ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾದರೂ ಫಲಕಾರಿಯಾಗಲಿಲ್ಲ. ಕೆಲವು ಗಂಟೆ ಕಳೆದಿದ್ದರೆ ತಾಹಿರಾ ಅವರು ಸ್ವದೇಶ ತಲುಪುತ್ತಿದ್ದರು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!