NEWSICS.COM
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೆಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ದೆಹಲಿಯ ಸದೈವ ಅಟಲ್ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು. ಅಮಿತ್ ಷಾ, ರಾಮನಾಥ್ ಕೋವಿಂದ್ ಉಪಸ್ಥಿತರಿದ್ದರು.
ಈ ಕುರಿತು ಮೋದಿ ಭಾರತ ಅಟಲ್ ಪ್ರಯತ್ನಗಳನ್ನು ಸದಾ ನೆನಪಿಸಿಕೊಳ್ಳುತ್ತೇವೆ. ಅವರ ದೂರದೃಷ್ಟಿ ಹಾಗೂ ನೇತೃತ್ವದಲ್ಲಿ ದೇಶ ಪ್ರಗತಿ ಸಾಧಿಸಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಟಲ್ ಜನ್ಮದಿನದ ಪ್ರಯುಕ್ತ ಪ್ರಧಾನಿ ಇಂದು ‘ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ಸಂಪುಟ’ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.
पूर्व प्रधानमंत्री आदरणीय अटल बिहारी वाजपेयी जी को उनकी जन्म-जयंती पर शत-शत नमन। अपने दूरदर्शी नेतृत्व में उन्होंने देश को विकास की अभूतपूर्व ऊंचाइयों पर पहुंचाया। एक सशक्त और समृद्ध भारत के निर्माण के लिए उनके प्रयासों को सदैव स्मरण किया जाएगा।
— Narendra Modi (@narendramodi) December 25, 2020