newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ ಸೂರ್ಯ ಮನೆಯಲ್ಲಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.
ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಮಾರ್ಚ್ 30ರಂದು ಯುವ ಮೋರ್ಚಾದ ಪ್ರತಿಭಟನೆ ವೇಳೆ ಕೆಲವು ಕಾರ್ಯಕರ್ತರು ಸಿಎಂ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿತ್ತು.