Tuesday, April 13, 2021

ಲಾಕ್ ಡೌನ್ ಸಂಕಷ್ಟ, ಆಂಧ್ರದಲ್ಲಿ ಅಟೋ, ಟ್ಯಾಕ್ಸಿ ಚಾಲಕರಿಗೆ 10 ಸಾವಿರ ರೂ. ಸಹಾಯಧನ

ಅಮರಾವತಿ: ಸತತ ಎರಡು ತಿಂಗಳ ಲಾಕ್ ಡೌನ್ ನಿಂದ‌ ಕಂಗೆಟ್ಟಿರುವ ಅಟೋ ಹಾಗೂ ಟ್ಯಾಕ್ಸಿ ಚಾಲಕರ ಸಹಾಯಕ್ಕೆ ಧಾವಿಸಿರುವ ಮುಖ್ಯಮಂತ್ರಿ ಜಗನ್ ತಲಾ 10 ಸಾವಿರ ರೂಪಾಯಿ ಸಹಾಯಧನ ಘೋಷಿಸಿದ್ದಾರೆ‌.
ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಅಟೋ, ಟ್ಯಾಕ್ಸಿ ಚಾಲಕರೊಂದಿಗೆ ವಿಡಿಯೋ ಕಾನ್ಪರೆನ್ಸ್‌ಮೂಲಕ‌ಮಾತನಾಡಿದ‌ ಸಿಎಂ ಜಗನ್, ವೈಎಸ್ಅರ್ ಮಿತ್ರ ಯೋಜನೆಯಡಿ ನೋಂದಾಯಿತ ಅಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ೧೦ ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಿದ್ದಾರೆ.
ಅಲ್ಲದೇ ಈ ಹಣವನ್ನು ಸಾಲದ‌ ಕಂತು ಪಾವತಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬಳಸಿ ಮದ್ಯಪಾನಕ್ಕೆ ಬಳಸಿಕೊಳ್ಳಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ.
ಆಂಧ್ರಪ್ರದೇಶ ದಲ್ಲಿ ಈಗಾಗಲೆ 2 ಲಕ್ಷದ 62 ಸಾವಿರ ಅಟೋ ಹಾಗೂ ಟ್ಯಾಕ್ಸಿ ಚಾಲಕರು ನೋಂದಾಯಿಸಿಕೊಂಡಿದ್ದು, ಇವರಿಗೆ ಅಂದಾಜು 262 ಕೋಟಿ ರೂಪಾಯಿ ಸಹಾಯಧನ ವಿತರಿಸಲಿದ್ದಾರೆ.
2019 ರಲ್ಲಿ ಈ ಚಾಲಕರುಗಳಿಗಾಗಿ ವಾರ್ಷಿಕವಾಗಿ 10 ಸಾವಿರ ರೂಪಾಯಿ ಸಹಾಯಧನ ನೀಡುವ ಯೋಜನೆಯನ್ನು ಜಗನ್ ಆರಂಭಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!