ದೆಹಲಿ: ಅಯೋಧ್ಯೆ ವಿಚಾರಗಳನ್ನು ಗಮನಿಸುವುದಕ್ಕಾಗಿಯೇ ಪ್ರತ್ಯೇಕ ವಿಭಾಗ ತೆರೆದಿರುವ ಕೇಂದ್ರ ಸರ್ಕಾರ, ಹೆಚ್ಚುವರಿ ಕಾರ್ಯದರ್ಶಿಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಿರುವುದಾಗಿ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಅಯೋಧ್ಯೆಗೆ ಸಂಬಂಧಿಸಿದ ವಿಚಾರಗಳು ಮತ್ತು ಕೋರ್ಟ್ ತೀರ್ಪಿಗೆ ಸಂಬಂಧಿಸಿದ ವಿಷಯಗಳನ್ನು ಅನುಸರಣೆ ಮಾಡುವ ನಿಟ್ಟಿನಲ್ಲಿ ಈ ವಿಭಾಗ ಕೆಲಸ ಮಾಡಲಿದೆ. ಅಡಿಷನಲ್ ಸೆಕ್ರಟರಿ ಗ್ಯಾನೇಶ್ ಕುಮಾರ್ ನೇತೃತ್ವದಲ್ಲಿ ಮೂವರು ಅಧಿಕಾರಿಗಳು ಇಲ್ಲಿ ಇರಲಿದ್ದಾರೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ನವೆಂಬರ್ 9ರಂದು ನೀಡಿರುವ ತೀರ್ಪಿನ ನಂತರದ ಮಹತ್ವದ ಬೆಳವಣಿಗೆ ಇದಾಗಿದೆ. ಸುಪ್ರೀಂ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿದೆ. ಅದೇ ರೀತಿ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ಕೊಡಬೇಕು ಎಂಬ ಆದೇಶವೂ ಆಗಿದೆ. ಉತ್ತರ ಪ್ರದೇಶ ಸರ್ಕಾರ ಈ ನಿಟ್ಟಿನಲ್ಲಿ ಮೂರು ಪ್ಲಾಟ್ಗಳನ್ನು ಗುರುತಿಸಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಿದೆ ಎಂದೂ ವರದಿಯಾಗಿದೆ.ಈ ಎಲ್ಲ ವಿಚಾರಗಳನ್ನೂ ಇನ್ನು ಈ ವಿಭಾಗ ನೋಡಿಕೊಳ್ಳಲಿದೆ.
ಕೇಂದ್ರ ಸರ್ಕಾರದಲ್ಲಿ ಅಯೋಧ್ಯೆ ವಿಭಾಗ ಆರಂಭ
Follow Us