ಬಾಬರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಲಕ್ನೋ: ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಮಹತ್ವದ ತೀರ್ಪು ನಾಳೆ ಹೊರಬರಲಿದೆ. ಸಿಬಿಐ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಲಿದೆ. ಬಿಜೆಪಿ ವರಿಷ್ಟರಾಗಿರುವ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ನ್ಯಾಯಾಲಯ ನೀಡಲಿರುವ ತೀರ್ಪು ದೇಶದ ರಾಜಕೀಯದಲ್ಲಿ ಕೂಡ ಸಂಚಲನ ಸೃಷ್ಟಿಸುವ ಸಾಧ್ಯತೆಯಿದೆ. ಈಗಾಗಲೇ ಅಯೋಧ್ಯೆ ವಿವಾದವನ್ನು ಬಗೆಹರಿಸಿ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ.