newsics.com
ತಿರುವನಂತಪುರಂ: ಕೇಂದ್ರ ಸರ್ಕಾರ ನಿಷೇಧಿಸಿರುವ ಬಿಬಿಸಿ ಸಾಕ್ಷ್ಯ ಚಿತ್ರದ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಕೇರಳದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತಿರುವನಂತಪುರಂನ ಪೂಜಾಪುರ ಮತ್ತು ಮನವಿಯಂ ಪ್ರದೇಶದಲ್ಲಿ ಅನುಮತಿ ಪಡೆಯದೆ ಪ್ರತಿಭಟನೆ ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೇರಳದಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರ ಬೆಂಬಲ ಸೂಚಿಸಿದೆ. ಡಿವೈಎಫ್ ಐ ಮತ್ತು ಯುವ ಕಾಂಗ್ರೆಸ್ ಘಟಕ ಸಾಕ್ಷ್ಯ ಚಿತ್ರ ಪ್ರದರ್ಶನ ಆಯೋಜಿಸಿದ್ದವು.
ಎಲ್ಲರೂ ನನ್ನ ಸಹೋದರಿಯರು ಆದರೆ ನೀನಲ್ಲ: ಟ್ಯಾಗ್ ಲೈನ್ ಹಂಚಿಕೊಂಡ ನಟಿ ರಮ್ಯಾ