newsics.com
ಅಹ್ಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಸೋಮವಾರ ನೂತನ ಸರ್ಕಾರ ರಚಿಸಲಿದೆ. ಎರಡನೆ ಬಾರಿ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪ್ರಮಾಣ ವಚನ ಸಮಾರಂಭ ಡಿಸೆಂಬರ್ 12ರಂದು ನಡೆಯಲಿದೆ. ಬುಹುತೇಕ ರಾಜಭವನ ಇಲ್ಲದಿದ್ದರೆ ಮೋದಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.