Wednesday, October 5, 2022

ಬಿಗ್ ಬಾಸ್ಕೆಟ್ ಬಳಕೆದಾರರ ಮಾಹಿತಿ ಸೋರಿಕೆ ಆರೋಪ

Follow Us

Newsics.com

ಬೆಂಗಳೂರು: ಪಡಿತರ ವಸ್ತುಗಳನ್ನು ಮನೆ ಮನೆಗೆ ಪೂರೈಸುತ್ತಿರುವ ಆನ್ ಲೈನ್ ಸಂಸ್ಥೆ ಬಿಗ್ ಬಾಸ್ಕೆಟ್  ಗ್ರಾಹಕರ ಮಾಹಿತಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ.  ಈ ಸಂಬಂಧ ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಂಸ್ಛೆ ದೂರು ನೀಡಿದೆ ಎಂದು ವರದಿಯಾಗಿದೆ.

ಎರಡು ಕೋಟಿ ಬಳಕೆದಾರರ ಇ ಮೇಲ್ , ಮೊಬೈಲ್ ಸಂಖ್ಯೆ ಎಲ್ಲವೂ ಸೋರಿಕೆಯಾಗಿದೆ. ಇದನ್ನು ಡಾರ್ಕ್ ವೆಬ್ ಸೈಟ್ ನಲ್ಲಿ ಮಾರಾಟಕ್ಕಿಡಲಾಗಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 14ರಂದು ಸೈಬರ್ ಕಳ್ಳರು ಈ ಮಾಹಿತಿ ಕದ್ದಿದ್ದಾರೆ ಎಂದು ಹೇಳಲಾಗಿದೆ. ಇದೇ ವೇಳೆ ಬಳಕೆದಾರರ  ಆರ್ಥಿಕ ಮಾಹಿತಿ ಸೋರಿಕೆಯಾಗಿಲ್ಲ ಎಂದು ಬಿಗ್ ಬಾಸ್ಕೆಟ್ ಹೇಳಿದೆ.

ಬಿಗ್ ಬಾಸ್ಕೆಟ್ ಸಂಸ್ಥೆ ಸಾಮಾನ್ಯವಾಗಿ ಬಳಕೆದಾರರ  ಮೊಬೈಲ್ ಮತ್ತು ಈ ಮೇಲ್ ಮಾತ್ರ ಸಂಗ್ರಹಿಸುತ್ತಿದೆ. ಇದರ ಹೊರತಾಗಿ ಇನ್ನಿತರ ಮಾಹಿತಿ ಪಡೆಯುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಬಿಗ್ ಬಾಸ್ಕೆಟ್ ನ ಮಾಹಿತಿ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಡೇಟಾ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!