Monday, October 3, 2022

ಬಿಹಾರ ವಿಧಾನಸಭೆ; 163 ವಿಜೇತರ ವಿರುದ್ಧ ಕ್ರಿಮಿನಲ್ ಕೇಸ್

Follow Us

newsics.com
ಪಾಟ್ನಾ(ಬಿಹಾರ): ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಯ ಗಳಿಸಿದವರ ಪೈಕಿ 163 ವಿಜೇತರು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ.
ಅಪರಾಧ ಪ್ರಕರಣವಿರುವ ವಿಜೇತರನ್ನು ಹೊಂದಿರುವ ಪಕ್ಷಗಳ ಪೈಕಿ ಆರ್‌ಜೆಡಿ ಮೊದಲ ಸ್ಥಾನದಲ್ಲಿದ್ದು, ಶೇ 73ರಷ್ಟು ಚುನಾಯಿತ ಅಭ್ಯರ್ಥಿಗಳು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಇವರ ಮೇಲಿವೆ. 163 ಮಂದಿ ಅಂದರೆ ಶೇ 68ರಷ್ಟು ಮಂದಿ ಅಪರಾಧ ಪ್ರಕರಣಗಳನ್ನು ಹೊಂದಿದ್ದಾರೆ. ಇದರಲ್ಲಿ 123 ಮಂದಿ (ಶೇ 51) ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ.
ನಾಮಪತ್ರ ಸಲ್ಲಿಸುವ ವೇಳೆ ನೀಡಿರುವ ಅಫಿಡವಿಟ್‌ ಮೂಲಕ ಈ ಮಾಹಿತಿ ಬಹಿರಂಗವಾಗಿದೆ.
123 ವಿಜೇತರಲ್ಲಿ 19 ಕೊಲೆ ಪ್ರಕರಣ, 31 ಕೊಲೆಯ ಪ್ರಯತ್ನ ಮತ್ತು ಎಂಟು ಮಂದಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಹೊಂದಿದ್ದಾರೆ. ತೇಜಸ್ವಿ ಯಾದವ್ ಅವರ ಆರ್‌ಜೆಡಿ ಪಕ್ಷದ 74 ವಿಜೇತರಲ್ಲಿ 54 (ಶೇ 73) ಮಂದಿ ವಿರುದ್ಧ ಅಪರಾಧ ಪ್ರಕರಣಗಳು ಬಾಕಿ ಇವೆ. ಬಿಜೆಪಿಯ 73 ರಲ್ಲಿ 47 ಮಂದಿ (ಶೇ 64) ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ. ಜೆಡಿಯುದ 43 ವಿಜೇತರಲ್ಲಿ 20 ಮಂದಿ (ಶೇ 47), ಕಾಂಗ್ರೆಸ್‌ನ 19ರಲ್ಲಿ 16 ಮಂದಿ (ಶೇ 84), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ ಲೆನಿನಿಸ್ಟ್ ಲಿಬರೇಷನ್ ಪಕ್ಷದ 12 ರಲ್ಲಿ 10 (ಶೇ 83) ಮಂದಿ ಹಾಗೂ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷದ ಎಲ್ಲ ಐದೂ (ಶೇ 100) ವಿಜೇತರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!