Wednesday, October 5, 2022

ಬಿಹಾರ ವಿಧಾನಸಭಾ ಚುನಾವಣೆ: ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟ

Follow Us

Newsics.com

ಪಾಟ್ನ: ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ ಎಂಟು ಗಂಟೆಗೆ ಮತ ಎಣಿಕೆ ನಡೆಯಲಿದೆ.ಬಿಹಾರ ವಿಧಾನಸಭೆಯ ಒಟ್ಟು ಸದಸ್ಯ ಬಲ 243. ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತು ಆರ್ ಜೆ ಡಿ ನೇತೃತ್ವದ ಮಹಾ ಮೈತ್ರಿಕೂಟದ ಮಧ್ಯೆ ನಿಕಟ ಪೈಪೋಟಿ ಇದೆ.

ಮತದಾನೋತ್ತರ ಸಮೀಕ್ಷೆಗಳು ಆರ್ ಜೆ ಡಿ ಮೈತ್ರಿಕೂಟಕ್ಕೆ ಜಯದ ಮುನ್ಸೂಚನೆ ನೀಡಿವೆ. ನಿತೀಶ್ ಕುಮಾರ್ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಎದ್ದಿದೆ ಎಂಬ ಅಂಶ ಈ ಸಮೀಕ್ಷೆಗಳಲ್ಲಿ ವ್ಯಕ್ತವಾಗಿತ್ತು.

2015ರ ಚುನಾವಣೆಯಲ್ಲಿ ಬಿಜೆಪಿ 53, ಜೆಡಿಯು 71, ಆರ್ ಜೆ ಡಿ 80 , ಕಾಂಗ್ರೆಸ್ 27 ಮತ್ತು ಇತರರು 10 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖ ಚುನಾವಣಾ ವಿಷಯವಾಗಿ ಬದಲಾಗಿತ್ತು. ಮಂಗಳವಾರ ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!