ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಕುರಿತು ತನಿಖೆ ನಡೆಸಲು ಮುಂಬೈಗೆ ಆಗಮಿಸಿದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದು ತನಿಖೆಯ ಹಾದಿ ತಪ್ಪಿಸುವ ಪ್ರಯತ್ನ ಎಂದು ಬಿಹಾರ ಪೊಲೀಸ್ ಮಹಾ ನಿರ್ದೇಶಕ ಗುಪ್ತೇಶ್ವರ ಪಾಂಡೆ ಹೇಳಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸ್ ತಂಡದ ನೇತೃತ್ವ ವಹಿಸುವಂತೆ ವಿನಯ್ ತಿವಾರಿಗೆ ಬಿಹಾರ ಸರ್ಕಾರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಗೆ ಬಂದ ತಿವಾರಿಯನ್ನು ಆರೋಗ್ಯ ಅಧಿಕಾರಿಗಳು ಕ್ವಾರಂಟೈನ್ ಗೆ ಗುರಿಪಡಿಸಿದ್ದಾರೆ.
ಬಿಹಾರ ರಾಜಧಾನಿ ಪಾಟ್ನ ನಗರದ ಎಸ್ ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಯ್ ತಿವಾರಿ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿದ್ದಾರೆ. ಸಾಹಿತಿ ಕೂಡ ಆಗಿರುವ ವಿನಯ್ ತಿವಾರಿ ಹಲವು ಕವಿತೆಗಳನ್ನು ರಚಿಸಿದ್ದಾರೆ