ದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
2016 ಡಿಸೆಂಬರ್ 31ರಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದ ಬಿಪಿನ್ ರಾವತ್ ಅವರ ಅಧಿಕಾರಾವಧಿ ನಾಳೆ ಕೊನೆಗೊಳ್ಳುತ್ತಿತ್ತು. ಅದಕ್ಕೂ ಮೊದಲೇ ಸರ್ಕಾರ ಅವರನ್ನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶಿಸಿದೆ.
ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಭಾರತೀಯ ಸೇನಾ ಪಡೆಗಳ ಬಗ್ಗೆ ಸರ್ಕಾರಕ್ಕೆ ನೇರ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ.
ಮಂಗಳವಾರ ಜನರಲ್ ಬಿಪಿನ್ ರಾವತ್ ಅವರು ಮಂಗಳವಾರ (ಡಿ.31) ಸೇನಾ ಮುಖ್ಯಸ್ಥ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಜತೆಗೆ ಸೇನಾ ಉಪ ಮುಖ್ಯಸ್ಥರಾಗಿರುವ ಮುಕುಂದ್ ನರವಾಣೆ ಸೇನೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.