ನವದೆಹಲಿ: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನಹೊಂದಿದ್ದಾರೆ. ಅವರಿಗೆ 82 ವರ್ಷ ಪ್ರಾಯವಾಗಿತ್ತು. ವಾಜಪೇಯಿ ಸಚಿವ ಸಂಪುಟದಲ್ಲಿ ಅವರು ಸಚಿವರಾಗಿದ್ದರು. ವಿದೇಶಾಂಗ ಇಲಾಖೆ ಸೇರಿದಂತೆ ಮಹತ್ವದ ಖಾತೆಗಳನ್ನು ಅವರು ನಿರ್ವಹಿಸಿದ್ದರು.
ಐದು ಬಾರಿ ರಾಜ್ಯ ಸಭೆ ಮತ್ತು ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.