Monday, April 12, 2021

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕನ ಬರ್ಬರ ಹತ್ಯೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹೆಮತಾಬಾಡ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರ ನಾಥ್ ರಾಯ್ ಬರ್ಬರವಾಗಿ ಕೊಲೆಗೀಡಾದ ಶಾಸಕ. ದೇವೇಂದ್ರ ನಾಥ್ ರಾಯ್ ಅವರನ್ನು ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡರೆಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.  ಹೇಮತಾಬಾಡ್ ಮೀಸಲು ವಿಧಾನಸಭಾ ಕ್ಷೇತ್ರವಾಗಿದ್ದು, ದೇವೇಂದ್ರ ನಾಥ್ ಅವರು ಕಳೆದ ಬಾರಿ ಜಯಗಳಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಬಿಜೆಪಿ ಶಾಸಕನ ಬರ್ಬರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಪಶ್ಚಿಮ ಬಂಗಾಳದಲ್ಲಿ ಗೂಂಡಾ ರಾಜ್ಯ ಅಸ್ತಿತ್ವದಲ್ಲಿರುವುದಕ್ಕೆ  ,ಸ್ಪಷ್ಟ ಉದಾಹರಣೆ ಎಂದು  ಅವರು ಹೇಳಿದ್ದಾರೆ.

ರಾಜ್ಯ ಬಿಜೆಪಿ ನಾಯಕಿ ಹಾಗೂ ಸಂಸದರಾಗಿರುವ ಶೋಭಾ ಕರಂದ್ಲಾಜೆ ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೇರಿದ್ದಕ್ಕೆ  ಪ್ರತೀಕಾರವಾಗಿ ಶಾಸಕರನ್ನು ಹತ್ಯೆ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!