newsics.com
ನವದೆಹಲಿ: ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹಾಗೂ ರೈತರ ಹೋರಾಟದ ಬಗ್ಗೆ ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಇಂದು ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ.
ರೈತರ ಪ್ರತಿಭಟನೆ ಬಿಜೆಪಿಯ ಚುನಾವಣಾ ಗೆಲುವಿನ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.