newsics.com
ಮುಂಬೈ: ನಗರದ ಮಲಾಡ್ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಉದ್ಯಾನವನಕ್ಕೆ ಟಿಪ್ಪು ಸುಲ್ತಾನ್ ಎಂದು ನಾಮಕರಣ ಮಾಡಿರುವುದಕ್ಕೆ ಮಹಾರಾಷ್ಟ್ರ ಬಿಜೆಪಿ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಟಿಪ್ಪು ಸುಲ್ತಾನ್ ತನ್ನ ಆಡಳಿತಾವಧಿಯಲ್ಲಿ ಸಾವಿರಾರು ಹಿಂದೂಗಳ ನರಮೇಧ ಮಾಡಿದ್ದಾನೆ. ಇಂತಹ ಟಿಪ್ಪು ಹೆಸರಿಡುವ ಅಗತ್ಯ ಏನಿತ್ತು ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಪ್ರಶ್ನಿಸಿದೆ.
ಹಿಂದುತ್ವ ಕುರಿತಂತೆ ಶಿವಸೇನಾ ಮತ್ತು ಬಿಜೆಪಿ ಮಧ್ಯೆ ತೀವ್ರ ಆರೋಪ ಪ್ರತ್ಯಾರೋಪ ಆರಂಭವಾಗಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ.