ಬಿಜೆಪಿ ಕಾರ್ಯಕರ್ತರ ವಿರುದ್ದ ಜಲ ಫಿರಂಗಿ ಬಳಕೆ

Newsics.com ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆಗೆ ಆಗ್ರಹಿಸಿ ತಿರುವನಂತಪುರಂ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಬಳಸಲಾಗಿದೆ. ಘರ್ಷಣೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಚಿನ್ನ ಕಳ್ಳ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶಾಮೀಲಾಗಿದ್ದಾರೆ. ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.