Tuesday, April 13, 2021

ತಮಿಳುನಾಡಿನ ನೈವೇಲಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಬಲಿ

ಚೆನ್ನೈ: ತಮಿಳುನಾಡಿನ ಕುಡಲೂರಿನಲ್ಲಿರುವ ನೈವೇಲಿ ಲಿಗ್ನೈಟ್ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬ್ಲಾಯರ್ ಸ್ಫೋಟದಿಂದ ಈ ದುರಂತ ಸಂಭವಿಸಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಈ ಮಧ್ಯೆ ತಮಿಳುನಾಡು ಮುಖ್ಯಮಂತ್ರಿ ಜತೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಗತ್ಯ ಇರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ದುರಂತ  ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!