Saturday, April 17, 2021

ಬಾಲಿವುಡ್ ನಟಿ ರೇಖಾ ನಿವಾಸ ಸೀಲ್’ಡೌನ್

ಮುಂಬೈ: ಬಾಲಿವುಡ್’ನ ಹಿರಿಯ ನಟಿ ರೇಖಾ ಅವರ ನಿವಾಸ ಸೀ ಸ್ಪ್ರಿಂಗ್ಸ್ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಬಂಗಲೆಯ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಂಬೈನ ಬಾಂದ್ರಾದ ಬ್ಯಾಂಡ್ ಸ್ಟಾಂಡ್ ನಲ್ಲಿರುವ ಸೀ ಸ್ಪ್ರಿಂಗ್ಸ್ ಬಂಗಲೆಯಲ್ಲಿ ರೇಖಾ ವಾಸವಾಗಿದ್ದಾರೆ. ಮುಂಬೈನ ಸ್ಥಳೀಯ ಆಡಳಿತ ಬಿಎಂಸಿ ಅವರ ಬಂಗಲೆ ಎದುರು ಸೀಲ್ ಡೌನ್ ನೋಟಿಸ್ ಅಂಟಿಸಿರುವುದಲ್ಲದೆ ಈ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿಸಿ ಆದೇಶ ಹೊರಡಿಸಿದೆ.
ಆದರೆ ಈ ಬಗ್ಗೆ ರೇಖಾ ಅವರಾಗಲೀ, ಅವರ ವಕ್ತಾರರಾಗಲೀ ಯಾವುದೇ ಹೇಳಿಕೆ ನೀಡಿಲ್ಲ. ರೇಖಾ ಅವರ ಸೀ ಸ್ಪ್ರಿಂಗ್ ಬಂಗಲೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯಿದ್ದು, ಇವರಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದ್ದು, ಮುಂಬೈನ ಬಿಕೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖ್ಯಾತ ನಟರಾದ ಅಮಿರ್ ಖಾನ್, ಜಾಹ್ನವಿ ಕಪೂರ್, ನಿರ್ದೇಶಕ ಕರಣ್ ಜೋಹರ್ ಅವರ ನಿವಾಸದ ಸಿಬ್ಬಂದಿಗೂ ಕೊರೋನಾ ಸೋಂಕು ತಗುಲಿದ್ದು, ಅವರ ನಿವಾಸಗಳನ್ನೂ ಈಗಾಗಲೇ ಸೀಲ್ ಡೌನ್ ಮಾಡಲಾಗಿತ್ತು.

ಅಮಿತಾಭ್ ಬಚ್ಚನ್’ಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!