ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನ ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 15ರಿಂದ 20 ಮಂದಿ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಭಿವಂಡಿಯ ಪಟೇಲ್ ಕಂಪೌಂಡ್ ನಲ್ಲಿ ಈ ದುರಂತ ಸಂಭವಿಸಿದೆ, ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ