Wednesday, July 6, 2022

ಕಳ್ಳಭಟ್ಟಿ ಸೇವನೆ; ಮೃತರ ಸಂಖ್ಯೆ 98ಕ್ಕೇರಿಕೆ

Follow Us

ಚಂಡೀಗಡ: ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಭಾನುವಾರ 98ಕ್ಕೆ ಏರಿಕೆಯಾಗಿದೆ.
ತರ್ನ್‌ ಟರಾನ್‌ ಜಿಲ್ಲೆಯಲ್ಲಿ ಹೊಸ ಹನ್ನೆರಡು ಸಾವಿನ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಈ ಜಿಲ್ಲೆಯಲ್ಲಿ 75 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ. ಅಮೃತಸರದಲ್ಲಿ 12, ಬಟಾಲಾದಲ್ಲಿ 11 ಮಂದಿ ಮೃತರಾಗಿದ್ದಾರೆ.
ಘಟನೆಗೆ ಪಂಜಾಬ್‌ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ರಾಜ್ಯದ ಪಟಿಯಾಲ, ಬರ್ನಾಲಾ, ಪಠಾಣ್‌ಕೋಟ್ ಮತ್ತು ಮೊಗಾ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದೆ.
ಪ್ರಕರಣದ ಬಗ್ಗೆ ನ್ಯಾಯಾಂಗ‌ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ, ಈಗಾಗಲೇ ಏಳು ಅಬಕಾರಿ ಮತ್ತು ಆರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಪೊಲೀಸ್‌ ಹಾಗೂ ಅಬಕಾರಿ ಇಲಾಖೆಯ ವೈಫಲ್ಯ ನಾಚಿಕೆಗೇಡಿನ ವಿಷಯ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ‌ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹ 2 ಲಕ್ಷ ನೆರವು ಘೋಷಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!