Wednesday, October 5, 2022

ಸೇತುವೆಯಿಂದ ನದಿಗೆ ಬಿದ್ದ ಬಸ್: ಒಂದೇ ಕುಟುಂಬದ ಐವರ ಸಾವು, 8 ಮಂದಿಗೆ ಗಾಯ

Follow Us

NEWSICS.COM

ಮುಂಬೈ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಸೇತುವೆಯಿಂದ 40ಅಡಿ ಆಳಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿದ್ದು 8 ಜನ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಕುಟುಂಬವೊಂದು ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿತ್ತು. ಆದರೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾದ್ ಪಟ್ಟಣದ ಪುಣೆ -ಬೆಂಗಳೂರು ಹೆದ್ದಾರಿಯಲ್ಲಿ ಶನಿವಾರ(ನ. 14) ಮುಂಜಾನೆ 4.30-4.45 ರ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನೀರು ಬತ್ತಿದ ತಾರ್ಲಿ ನದಿಗೆ ಬಿದ್ದಿದೆ.‌ ಪರಿಣಾಮ 5ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಉಷಾ ನಾಯರ್ (40), ಮಧುಸೂದನ್ ನಾಯರ್ (42), ಆದಿತ್ಯ ನಾಯರ್ (23), ಸಜನ್ ನಾಯರ್ (35) ಮತ್ತು ಆರವ್ ನಾಯರ್ (3) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಎನ್ನಲಾಗಿದೆ.

ಅತಿಯಾದ ಮದ್ಯ ಸೇವನೆ : ಐವರು ಸಾವು

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!