newsics.com
ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತೆಂಕಶಿ ಜಿಲ್ಲೆಯ ಕಡಯಂ ನಿವಾಸಿಗಳು ಎಂದು ತಿಳಿದುಬಂದಿದೆ. ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ನಂತರ ಬಸ್ ನಾಲೆಗೆ ಬಿದ್ದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಕೊಯಮತ್ತೂರ್‌ಗೆ ಕಳುಹಿಸಲಾಗಿದೆ.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಿಸಿದರು. ಸಣ್ಣಪುಟ್ಟ ಗಾಯಗಳಾಗಿರುವ ಪ್ರತಿಯೊಬ್ಬರಿಗೂ 50 ಸಾವಿರ ರೂ. ನೀಡಲಾಗುವುದು ಎಂದು ಸಿಎಂ ಪ್ರಕಟಣೆ ತಿಳಿಸಿದೆ.