Wednesday, July 6, 2022

ಕೋವಿಡ್ ಪರೀಕ್ಷೆಗಾಗಿ ಆಂಧ್ರದಲ್ಲಿ ರಸ್ತೆಗಿಳಿದ ಬಸ್’ಗಳು

Follow Us

ಅಮರಾವತಿ: ಆಂಧ್ರಪ್ರದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ಹಲವು ವಿಧಾನಗಳನ್ನು ಜಾರಿ ಮಾಡಿದೆ. ಕೊರೋನಾ ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ.
ಆಂಧ್ರ ಸರ್ಕಾರ ಈಗ ಬಸ್’ನಲ್ಲೇ ಕೊರೋನಾ ಪರೀಕ್ಷಾ ಕೇಂದ್ರಗಳನ್ನು ತೆರೆದಿದೆ. ಶುಕ್ರವಾರ ಇಂತಹ 52 ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದೆ. ರಾಜ್ಯದಲ್ಲಿನ ಅತಿ ಹೆಚ್ಚು ಸೋಂಕಿತ ಪ್ರದೇಶಗಳಲ್ಲಿ ಈ ಬಸ್‌ಗಳು ಸಂಚಾರ ನಡೆಸಲಿವೆ. ಬಸ್‌ನಲ್ಲಿಯೇ ಕೋವಿಡ್ ಸೋಂಕಿತರ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಆಂಧ್ರಪ್ರದೇಶ ಸರ್ಕಾರ ಇದುವರೆಗೆ 102 ಬಸ್‌ಗಳನ್ನು ಪರೀಕ್ಷೆಗಾಗಿಯೇ ಬಿಡುಗಡೆ ಮಾಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಬಸ್‌ಗಳು ಸಂಚಾರ ನಡೆಸುತ್ತಿವೆ. 95 ವಿವಿಧ ಸ್ಥಳಗಳಲ್ಲಿ ಬಸ್‌ಗಳು ಕೋವಿಡ್ ಸೋಂಕಿತರ ಮಾದರಿಗಳನ್ನು ಸಂಗ್ರಹ ಮಾಡುತ್ತಿವೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!