newsics.com
ಲಖನೌ: 2024ರ ಲೋಕಸಭಾ ಚುನಾವಣೆಯ ವೇಳೆಗೆ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.
2023ರ ಡಿಸೆಂಬರ್ನಲ್ಲಿ ಭಕ್ತರಿಗಾಗಿ ದೇವಾಲಯವನ್ನು ತೆರೆಯಲಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.
ದೇವಾಲಯದ ಆಧಾರಸ್ತಂಭವನ್ನು ಮಿರ್ಜಾಪುರದಿಂದ ತಂದ 4 ಲಕ್ಷ ಕಲ್ಲುಗಳಿಂದ ನಿರ್ಮಾಣ ಮಾಡಲಾಗುತ್ತಿದ್ದು, ದೇವಾಲಯದ ನಿರ್ಮಾಣಕ್ಕೆ ರಾಜಸ್ಥಾನದ ಬನ್ಶಿಪಹರ್ಪುರದಿಂದ ಕಲ್ಲುಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಮಂದಿರದ ಮೊದಲ ಅಡಿಪಾಯ ಪೂರ್ಣಗೊಂಡಿದ್ದು, ಎರಡನೇ ಹಂತದ ಅಡಿಪಾಯದ ಕೆಲಸವನ್ನು ನವೆಂಬರ್ 15ರೊಳಗೆ ಪೂರ್ಣಗೊಳಿಸಲಾಗುವುದು. ಸದ್ಯ ಕಾಂಕ್ರೀಟ್ ಹಾಕಲಾಗುತ್ತಿದೆ ಎಂದು ಹೇಳಿದರು.
ಸೌರಶಕ್ತಿಯಿಂದ ಇಸ್ತ್ರಿ ಮಾಡುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ 14ರ ಬಾಲಕಿ: ‘ಇಕೋ ಆಸ್ಕರ್’ಗೆ ಆಯ್ಕೆ