ದೆಹಲಿ: ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮೇಲೆ ಚರ್ಚೆ ನಡೆದಾಗ ಮಾತನಾಡದ ಯಾವುದೇ ಪ್ರತಿಪಕ್ಷದ ನಾಯಕರು ಈಗ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳಿಗೆ ಪ್ರತಿಪಕ್ಷಗಳೇ ಕಾರಣವೆಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ನೇತೃತ್ವದ ತುಕಡೆ ತುಕಡೆ ಗ್ಯಾಂಗ್ಗೆ ಪಾಠ ಕಲಿಸಲು ಇದು ಸೂಕ್ತ ಸಮಯ ಎಂದು ಅಮಿತ್ ಷಾ ಹೇಳಿದರು.
ಸಿಎಎ: ಹಿಂಸಾತ್ಮಕ ಪ್ರತಿಭಟನೆಗೆ ಪ್ರತಿಪಕ್ಷಗಳೇ ಕಾರಣ- ಷಾ
Follow Us