Thursday, December 2, 2021

5 ಉಗ್ರರ ಹತ್ಯೆ; ಐವರು ಯೋಧರು ಹುತಾತ್ಮ

Follow Us

ಶ್ರೀನಗರ: ಜಮ್ಮು ಕಾಶ್ಮೀರದೊಳಗೆ ನುಸುಳಿದ್ದ 5 ಉಗ್ರರನ್ನು ಸದೆಬಡಿಯುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ. ಕಾರ್ಯಾಚರಣೆ ವೇಳೆ ಐವರು ಯೋಧರು ಹುತಾತ್ಮರಾಗಿದ್ದಾರೆ.
ಹುತಾತ್ಮರಾದ ಯೋಧರನ್ನು ಹಿಮಾಚಲ ಪ್ರದೇಶದ ಸುಬೇದಾರ್ ಸಂಜೀವ್ ಕುಮಾರ್, ಉತ್ತರಾಖಂಡದ ಹವೇಲ್ದಾರ್ ದೇವೇಂದ್ರ ಸಿಂಗ್, ಹಿಮಾಚಲ ಪ್ರದೇಶದ ಬಾಲಕಿಷನ್, ಉತ್ತರಾಖಂಡದ ಅಮಿತ್ ಕುಮಾರ್, ರಾಜಸ್ಥಾನದ ಛತ್ರಪಾಲ್ ಸಿಂಗ್ ಎಂದು ಗುರುತಿಸಲಾಗಿದೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರನ್ ವಲಯದಲ್ಲಿರುವ ಗಡಿಯಲ್ಲಿ ಸೇನಾಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ. ಕಾಶ್ಮೀರದ ಗಡಿಯೊಳಗೆ ಉಗ್ರರು ನುಸುಳುತ್ತಿರುವ ಮಾಹಿತಿ ದೊರೆತಿದ್ದರಿಂದ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಉಗ್ರರು ಮತ್ತು ಸೈನಿಕರು ನಡುವೆ ಗುಂಡಿನ ಕಾಳಗ ನಡೆದಿದೆ. ಕಾಶ್ಮೀರದಲ್ಲಿ ಹಿಮಪಾತವಾಗುತ್ತಿರುವುದನ್ನೇ ಅನುಕೂಲಕ್ಕೆ ಬಳಸಿಕೊಂಡು ಒಳಗೆ ನುಸುಳಲು ಪ್ರಯತ್ನಿಸಿದ್ದ ಉಗ್ರರನ್ನು ಸದೆಬಡಿಯಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!