Tuesday, May 24, 2022

ಸಿಬಿಎಸ್‌ಇ ವಿದ್ಯಾರ್ಥಿಗಳ ಹಿತರಕ್ಷಣೆ; ಯುಜಿಸಿ, ಸಿಬಿಎಸ್‌ಇಗೆ ಸುಪ್ರೀಂ ಸೂಚನೆ

Follow Us

newsics.com
ನವದೆಹಲಿ: ಈ ಸಾಲಿನ 12ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ಶೀಘ್ರ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಸಿಬಿಎಸ್‌ಇಗೆ ನಿರ್ದೇಶನ ನೀಡಿದೆ.
ಕೊರೋನಾ ಸಂದರ್ಭವಾಗಿರುವುದರಿಂದ ಈ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಯುಜಿಸಿಗೆ ಸೂಚಿಸಿದೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ. ಕಾನ್ವಿಲ್ಕರ್, ಸಂಜೀವ್ ಖನ್ನಾ ಅವರಿದ್ದ ಪೀಠ ಈ ಸಲಹೆ ನೀಡಿದೆ. ಸೆ. 24ರ ವರೆಗೆ ವೇಳಾಪಟ್ಟಿಯನ್ನು ಪ್ರಕಟಿಸಬಾರದು ಎಂದು ಸೂಚಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿದೆ.
ಸಿಬಿಎಸ್‌ಇ 12ನೇ ತರಗತಿಯ ಪೂರಕ ಪರೀಕ್ಷೆ ಪರೀಕ್ಷೆ ಇಂದಿನಿಂದ (ಸೆ.22) ಆರಂಭವಾಗಿದ್ದು ಸೆ.29 ರವರೆಗೆ ನಡೆಯಲಿದ್ದು, ಎರಡು ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಯುಜಿಸಿ ಹಾಗೂ ಸಿಬಿಎಸ್‌ಇಗೆ ಸುಪ್ರೀಂ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!