Saturday, April 17, 2021

ನಟಿ ರಮ್ಯಾಕೃಷ್ಣ ಕಾರಲ್ಲಿ ಸಾಗಿಸುತ್ತಿದ್ದ ಮದ್ಯ ವಶ

ಚೆನ್ನೈ: ನಟಿ ರಮ್ಯಾಕೃಷ್ಣ ಅವರ ಕಾರಿನಲ್ಲಿ ಸಾಗಿಸುತ್ತಿದ್ದ 96 ಮದ್ಯದ ಬಾಟಲಿಗಳನ್ನು ಚೆನ್ನೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುದುಚೇರಿಯಿಂದ ಶುಕ್ರವಾರ ರಾತ್ರಿ ಚೆನ್ನೈಗೆ ತೆರಳುತ್ತಿದ್ದ ‘ಬಾಹುಬಲಿ’ ಶಿವಗಾಮಿ ಖ್ಯಾತಿಯ ನಟಿ ರಮ್ಯಾಕೃಷ್ಣ ಅವರ ಕಾರನ್ನು ಮುತ್ತುಕಾಡು ಚೆಕ್ಪೋಸ್ಟ್ ಸಮೀಪ ತಪಾಸಣೆ ವೇಳೆ 96 ಮದ್ಯದ ಬಾಟಲಿ ಸಿಕ್ಕಿದ್ದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನ ಚಾಲಕ ಸೆಲ್ವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಚಾಲಕನ ಬಂಧನವಾದ ಕೆಲವೇ ಗಂಟೆಯಲ್ಲಿ ನಟಿ ರಮ್ಯಾಕೃಷ್ಣ ಅವರು ಜಾಮೀನುಸಹಿತ ಖುದ್ದಾಗಿ ಪೊಲೀಸ್ ಠಾಣೆಗೆ ಆಗಮಿಸಿ ಚಾಲಕನನ್ನು ಬಿಡುಗಡೆ ಮಾಡಿಸಿಕೊಂಡು ತೆರಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!