Tuesday, April 13, 2021

ತಬ್ಲಿ ಜಮಾತ್, ಮೌಲಾನಾ ಸಾದ್ ವಿರುದ್ಧ ಸಿಬಿಐ ತನಿಖೆ ಆರಂಭ

ನವದೆಹಲಿ: ವಿದೇಶಿ ದೇಣಿಗೆ ಹಣ ದುರುಪಯೋಗದ ಹಿನ್ನೆಲೆಯಲ್ಲಿ ತಬ್ಲಿ ಜಮಾತ್ ಮತ್ತು ಮೌಲಾನಾ ಸಾದ್ ವಿರುದ್ಧ ಸಿಬಿಐ ತನಿಖೆ ಆರಂಭಿಸಿದೆ.
ಕೊರೋನಾ ಸಂದರ್ಭದಲ್ಲಿ ನಿಯಮಬಾಹಿರವಾಗಿ ಕಾರ್ಯಕ್ರಮ ಆಯೋಜಿಸಿ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದ ತಬ್ಲಿ ಜಮಾತ್ ಹಾಗೂ ಅದರ ಮುಖ್ಯಸ್ಥ ಮೌಲಾನಾ ಸಾದ್ ಗೆ ಸಿಬಿಐ ಸಂಕಷ್ಟ ಎದುರಾಗಿದೆ.
ವಿದೇಶ ಹಾಗೂ ಮಧ್ಯಪ್ರಾಚ್ಯ ದೇಶದ ಪ್ರಜೆಗಳಿಂದ ಅಕ್ರಮವಾಗಿ ದೇಣಿಗೆ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೆಹಲಿ ಪೊಲೀಸರು ಸಿಬಿಐಗೆ ಹಸ್ತಾಂತರಿಸಿದ್ದಾರೆ.
ಈ ಪ್ರಕರಣದಲ್ಲಿ 35 ದೇಶಗಳ ಒಟ್ಟು 910 ವಿದೇಶಿ ಪ್ರಜೆಗಳ ವಿರುದ್ಧ ಚಾರ್ಜಶೀಟ್ ಸಿದ್ಧಪಡಿಸಲಾಗಿದ್ದು, ಜಾರಿ ನಿರ್ದೇಶನಾಲಯ ಮೌಲಾನಾ ಸಾದ್ ಮತ್ತು ಇತರೇ ಎಂಟು ಜನರ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಬ್ಲಿ ಉದ್ಯೋಗಿಗಳ ಹೇಳಿಕೆಯನ್ನು ತನಿಖಾ ತಂಡ ದಾಖಲಿಸಿಕೊಂಡಿದೆ.
ಈಗಾಗಲೇ ದಾಖಲೆಗಳನ್ನು ಸಿಬಿಐ ಪರಿಶೀಲಿಸಲು ಆರಂಭಿಸಿದ್ದು, ಇನ್ನಷ್ಟು ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಸಿಬಿಐ ಎಫ್ ಐಆರ್ ದಾಖಲಿಸಲಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!