ಲಖನೌ: ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ಬಿಜೆಪಿ ಧುರೀಣ ಮತ್ತು ಮಾಜಿ ಉಪ ಪ್ರಧಾನಮಂತ್ರಿ ಲಾಲ್ಕೃಷ್ಣ ಅಡ್ವಾಣಿ ಅವರ ಹೇಳಿಕೆಗಳನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ (ಜುಲೈ 24) ದಾಖಲಿಸಿಕೊಂಡಿದೆ.
ಅಡ್ವಾಣಿ ಅವರು ವಿಡಿಯೋ ಲಿಂಕ್ ಮೂಲಕ ನೀಡಿದ ಹೇಳಿಕೆಯನ್ನು ವಿಶೇಷ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರ ನೇತೃತ್ವದ ನ್ಯಾಯಾಲಯ ದಾಖಲಿಸಿಕೊಂಡಿತು. ಗುರುವಾರ ಬಿಜೆಪಿ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಷಿ ವಿಡಿಯೋ ಲಿಂಕ್ ಮೂಲಕ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಮ್ಮ ಹೇಳಿಕೆ ನೀಡಿದ್ದರು. ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳುತ್ತಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣ; ಅಡ್ವಾಣಿ ಹೇಳಿಕೆ ದಾಖಲಿಸಿಕೊಂಡ ಸಿಬಿಐ ವಿಶೇಷ ಕೋರ್ಟ್
Follow Us