newsics.com
ನವದೆಹಲಿ: ಅಕ್ಟೋಬರ್ 10 ಅಥವಾ ಅದಕ್ಕೂ ಮುನ್ನವೇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಸುಪ್ರೀಂಕೋರ್ಟ್ಗೆ ಗುರುವಾರ ತಿಳಿಸಿದೆ.
ಎರಡು ಲಕ್ಷ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ಮಂಡಳಿಯು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠಕ್ಕೆ ತಿಳಿಸಿತು.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಪ್ರಥಮ ಪದವಿ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅಕ್ಟೋಬರ್ 31ರವರೆಗೂ ಕಾಲಾವಕಾಶ ಇದೆ. ಅಷ್ಟೊರಳಗೆ ಮಂಡಳಿಯು 12ನೇ ತರಗತಿಯ ಪೂರಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುತ್ತದೆ ಎಂದು ಸಿಬಿಎಸ್ಇ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.
ಕೊರೋನಾದಂತಹ ಕ್ಲಿಷ್ಟ ಸಮಯದಲ್ಲಿ ಸಿಬಿಎಸ್ಇ ಮತ್ತು ಯುಜಿಸಿ ವಿದ್ಯಾರ್ಥಿಗಳಿಗೆ ನೆರವಾಗಬೇಕು. ತಡಮಾಡದೇ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಬೇಕು. ಯುಜಿಸಿಯು ಈ ವಿದ್ಯಾರ್ಥಿಗಳ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಿಲೇವಾರಿ ಮಾಡಿದೆ.
ಅಕ್ಟೋಬರ್ 10ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ
Follow Us