ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಇಂದು ಮುಂಜಾನೆ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕುಪ್ವಾರ ಜಿಲ್ಲೆಯ ನೌಗಾಂ ವಲಯದಲ್ಲಿ ಪಾಕಿಸ್ತಾನ ಈ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತದ ಯೋಧರು ಪಾಕ್ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ.
ಕದನ ವಿರಾಮ ಸತತವಾಗಿ ಉಲ್ಲಂಘಿಸಿದರೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗವುದು ಎಂದು ಭಾರತ ಎಚ್ಚರಿಕೆ ನೀಡಿದೆ.