ಶ್ರೀನಗರ: ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಭಾರತದ ನಾಗರಿಕರನ್ನು ಗುರಿಯಾಗಿರಿಸಿ ಗುಂಡಿನ ದಾಳಿ ನಡೆಸಿದೆ. ಭಾರತದ ಯೋಧನೊಬ್ಬ ಹುತಾತ್ಮನಾಗಿದ್ದು , ಒಟ್ಟು ಇಬ್ಬರು ಮರಣ ಹೊಂದಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ಪಾಕಿಸ್ತಾನ ಈ ದುಸ್ಸಾಹಸಕ್ಕೆ ಮುಂದಾಗಿದೆ.