ನವದೆಹಲಿ: ದೆಹಲಿ ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಜೊತೆಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತಾವು ಪ್ರತಿಭಟನಾಕಾರರನ್ನು ಭೇಟಿಯಾಗಿ ಸಿಎಎ ಕುರಿತ ಅನುಮಾನಗಳನ್ನು ಬಗೆಹರಿಸಲು ಸರ್ಕಾರ ಸಿದ್ಧವಿದೆ. ಆದರೆ, ಅದು ವ್ಯವಸ್ಥಿತ ವಿಧಾನದಲ್ಲಿರಬೇಕು ಎಂದಿದ್ದಾರೆ. ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಸಿಎಎ ವಿರುದ್ಧ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಮುಂದಾಗಿದೆ.