Wednesday, October 5, 2022

14ರಾಜ್ಯಗಳಿಗೆ 6,195 ಕೋಟಿ ರೂ. ಆದಾಯ ಕೊರತೆ ಅನುದಾನ ಬಿಡುಗಡೆ

Follow Us

NEWSICS.COM

ನವದೆಹಲಿ: ರಾಜ್ಯಗಳಿಗೆ ಆಗುವ ಆದಾಯ ನಷ್ಟವನ್ನು ಸರಿದೂಗಿಸಲು ಕೇಂದ್ರದ ಹಣಕಾಸು ಆಯೋಗವು ಆದಾಯ ಕೊರತೆ ಅನುದಾನವನ್ನು ಒದಗಿಸುತ್ತದೆ.

ಇದರ ಮಾಸಿಕ ಕಂತಿನಂತೆ ಕೇಂದ್ರವು 14 ರಾಜ್ಯಗಳಿಗೆ 6,195 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ’15 ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸುಗಳ ಆಧಾರದ ಮೇಲೆ, ಸರ್ಕಾರವು 14 ರಾಜ್ಯಗಳಿಗೆ 6,195.08 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ, ಇದು ಆದಾಯ ಕೊರತೆ ಅನುದಾನದ ಎಂಟನೇ ಮಾಸಿಕ ಕಂತು” ಎಂದು ಹೇಳಿದ್ದಾರೆ.

14 ರಾಜ್ಯಗಳೆಂದರೆ ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಇದೇ ರೀತಿಯ ಮೊತ್ತವನ್ನು ಅನುದಾನವಾಗಿ ಬಿಡುಗಡೆ ಮಾಡಲಾಗಿತ್ತು.

2020ರ ಲೋಕೋಪಕಾರಿ ಪಟ್ಟಿಯಲ್ಲಿ ಅಜೀಮ್ ಪ್ರೇಮ್’ಜಿಗೆ ಅಗ್ರಸ್ಥಾನ

 

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!