Saturday, November 26, 2022

ಕೇಂದ್ರ ಸಚಿವ ಸಂಪುಟ ಶೀಘ್ರ ವಿಸ್ತರಣೆ: ರಾಜ್ಯಕ್ಕೆ ಸಿಗುವುದೇ ಅವಕಾಶ

Follow Us

newsics.com

ನವದೆಹಲಿ: ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ  ಕೇಂದ್ರ ಸಚಿವ ಸಂಪುಟ ಶೀಘ್ರವೇ ವಿಸ್ತರಣೆಯಾಗಲಿದೆ.

ಉತ್ತರಪ್ರದೇಶದ ಪ್ರಮುಖ ಜಾಟ್ ಸಮುದಾಯದ ಪ್ರತಿನಿಧಿಯೊಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಯಿದೆ. ಇದರ ಜತೆಗೆ ರಾಜ್ಯಕ್ಕೆ ಕೂಡ ಅವಕಾಶ ದೊರೆಯಲಿದೆಯೇ ಎಂಬ ಚರ್ಚೆ ಆರಂಭವಾಗಿದೆ.

ಈ ಹಿಂದೆ ದೇವಿ ಪ್ರಸಾದ್ ಶೆಟ್ಟಿ ಅವರ ಹೆಸರು ಈ ಪಟ್ಟಿಯಲ್ಲಿ ಕೇಳಿ ಬಂದಿತ್ತು. ಇದೀಗ ಆ ಕುರಿತು ಯಾವುದೇ

ಚರ್ಚೆ  ನಡೆದಿಲ್ಲ. ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಸುರೇಶ್ ಅಂಗಡಿ ಅವರ  ನಿಧನದ ಬಳಿಕ ಯಾರಿಗೂ ಅವಕಾಶ ನೀಡಿಲ್ಲ. ಇದರಿಂದಾಗಿ ರಾಜ್ಯದ ಸಂಸದರಲ್ಲಿ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಮಹಿಳೆಯರನ್ನು ಪರಿಗಣಿಸುವುದಾದರೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ದೊರೆಯಲಿದೆ . ಆದರೆ ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಈಗಾಗಲೇ ಸಚಿವರಾಗಿ ನೇಮಕಗೊಂಡಿರುವುದರಿಂದ ಇದರ ಸಾಧ್ಯತೆ ತೀರಾ ಕಡಿಮೆ ಎಂದು ವಿಶ್ಲೇಷಿಸಲಾಗುತ್ತಿದೆ.

20 ಗ್ರಾಂ ತೂಕದ ಚಿನ್ನದ ಸರ ನುಂಗಿದ ಸಾಕು ನಾಯಿ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!