Tuesday, April 13, 2021

ಇಂದು ನಿರ್ಮಲಾ ಸೀತಾರಾಮನ್ ಮೂರನೇ ಪತ್ರಿಕಾಗೋಷ್ಠಿ

ನವದೆಹಲಿ:  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದು ಕೇಂದ್ರ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನ ಮೂರನೇ ಪತ್ರಿಕಾಗೋಷ್ಠಿಯಾಗಿದೆ. ಮೊದಲ ದಿನ ಸಣ್ಣ ಕೈಗಾರಿಕೆಗಳಿಗೆ,ಎರಡನೆ ದಿನ ವಲಸೆ ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇಂದು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಯೋಜನೆ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.  ಪ್ರಧಾನಿ ನರೇಂದ್ರ ಮೋದಿ , ದೇಶದ ಆರ್ಥಿಕತೆ ಬಲಪಡಿಸಲು 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರ ಸ್ವರೂಪ ಮತ್ತು ಗುರಿಯನ್ನು  ಕೇಂದ್ರ ಹಣಕಾಸು ಸಚಿವರು ಪ್ರತಿದಿನ  ಸ್ಪಷ್ಟಪಡಿಸುತ್ತಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಯಾವುದೇ ಹೊಸತನ ಇಲ್ಲ ಎಂದು ಸಿಪಿಎಂ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!