Tuesday, April 13, 2021

ಬ್ಯಾಂಕ್ ಅಧ್ಯಕ್ಷರೊಂದಿಗೆ ಇಂದು ಕೇಂದ್ರ ಹಣಕಾಸು ಸಚಿವರ ಚರ್ಚೆ

ಮುಂಬೈ: ದೇಶದಲ್ಲಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಾರ್ವಜನಿಕ ರಂಗದ ಬ್ಯಾಂಕ್ ಗಳ ಮುಖ್ಯಸ್ಥರ ಜತೆ ಚರ್ಚೆ ನಡೆಸಲಿದ್ದಾರೆ. ಕಾರ್ಪೋರೇಟ್ ವಲಯ, ಕಿರು ಕೈಗಾರಿಕೆ ಹಾಗೂ ಸೇವಾ ರಂಗ ಎದುರಿಸುತ್ತಿರುವ ಬಿಕ್ಕಟ್ಟಿನ ಕುರಿತು ಸೀತಾರಾಮನ್ ಅವರು ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಸಮಗ್ರ ಚರ್ಚೆ ನಡೆಸಲಿದ್ದಾರೆ. ಆರ್ ಬಿ ಐ ಘೋಷಿಸಿರುವ ಕ್ರಮಗಳು ಬ್ಯಾಂಕ್ ಗಳ ಮೇಲೆ ಬೀರಿರುವ ಪರಿಣಾಮಗಳ ಕುರಿತು ಕೂಡ ಚರ್ಚೆ ನಡೆಯಲಿದೆ. ಆರ್ಥಿಕ ಬೆಳವಣಿಗೆ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಎರಡನೆ ಹಂತದ ಪ್ಯಾಕೇಜ್ ಜಾರಿಗೆ ಸಿದ್ದತೆ ನಡೆಸಿರುವಂತೆಯೇ ಈ ಮಹತ್ವಪೂರ್ಣ ಚರ್ಚೆ ನಡೆಯುತ್ತಿದೆ. ವಿದೇಶಗಳಲ್ಲಿ ಕೆಲಸ ಕಳೆದುಕೊಂಡು ಸಾವಿರಾರು ಮಂದಿ ಭಾರತೀಯರು ಸ್ವದೇಶಕ್ಕೆ ಹಿಂತಿರುಗುತ್ತಿರುವ ಹಿನ್ನೆಲೆಯಲ್ಲಿ  ಸ್ವ ಉದ್ಯೋಗ ಯೋಜನೆ ಜಾರಿ ನಿಟ್ಟಿನಲ್ಲಿ ಕೂಡ ಗಂಭೀರ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!