Tuesday, April 13, 2021

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ: ಇಂದು ಸುಪ್ರೀಂ ಕೋರ್ಟ್ ಗೆ ಕೇಂದ್ರದ ಪ್ರಮಾಣಪತ್ರ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸುವುದರ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ತನ್ನ ಅಭಿಪ್ರಾಯ ತಿಳಿಸಲಿದೆ. ಜುಲೈ 1ರಿಂದ 15ರ ತನಕ ಈ ಪರೀಕ್ಷೆ ನಡೆಸುವುದಾಗಿ ಸಿಬಿಎಸ್ಇ ಈ ಹಿಂದೆ ಪ್ರಕಟಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಪೋಷಕರು  ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇಂದು ಕೇಂದ್ರ ಸರ್ಕಾರ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಲಿದ್ದು, ಬಹುತೇಕ ಸುಪ್ರೀಂ ಕೋರ್ಟ್ ಇಂದೇ ತೀರ್ಪು ನೀಡುವ ಸಾಧ್ಯತೆಯಿದೆ. ಈ ಮಧ್ಯೆ ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದುಪಡಿಸುವುದು ಉತ್ತಮ ಎಂಬ ಸಲಹೆಯನ್ನು  ವಿಶ್ವ ವಿದ್ಯಾನಿಲಯ ಅನುದಾನ ಆಯೋಗ ಸರ್ಕಾರಕ್ಕೆ ನೀಡಿದೆ. ವಿದ್ಯಾರ್ಥಿಗಳ ಈ ಹಿಂದಿನ ಸೆಮಿಸ್ಟ್ ರ್ ಫಲಿತಾಂಶದ ಆಧಾರದಲ್ಲಿ ತೇರ್ಗಡೆ ಅತ್ಯುತ್ತಮ ಎಂದು ಯುಜಿಸಿ ಸಮಿತಿ ಅಭಿಪ್ರಾಯಪಟ್ಟಿದೆ. ವಿದ್ಯಾರ್ಥಿಗಳಿಗೆ ಈ ಫಲಿತಾಂಶ ತೃಪ್ತಿ ತರದಿದ್ದರೆ ಕೊರೋನಾ ಹಾವಳಿ ಮುಗಿದ ಬಳಿಕ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆಯೂ ಯುಜಿಸಿಯ ಸಲಹಾ ಸಮಿತಿ ಶಿಫಾರಸು ಮಾಡಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!