Thursday, August 18, 2022

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

Follow Us

newsics.com

ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು, ಡಿಸೆಂಬರ್ 1ರಿಂದ ಇವು ಜಾರಿಗೆ ಬರಲಿವೆ.

ಪ್ರಯಾಣಿಕರು ವಿಮಾನ ಬುಕ್ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ ನಲ್ಲಿ ಫಾರ್ಮ್ ತುಂಬಬೇಕು ಮತ್ತು ಈ ಹಿಂದಿನ 14 ದಿನಗಳ ಪ್ರಯಾಣದ ಮಾಹಿತಿಯನ್ನು ನಮೂದಿಸಬೇಕು. ಆರ್​ಟಿ-ಪಿಸಿಆರ್​ ಪರೀಕ್ಷೆಯ ಫಲಿತಾಂಶವನ್ನು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ ಗೆ ಅಪ್‌ ಲೋಡ್ ಮಾಡಬೇಕು. ಪ್ರಯಾಣ ಬೆಳೆಸುವ 72 ಗಂಟೆಗಳ ಒಳಗೆ ಪರೀಕ್ಷೆ ಮಾಡಿಸಿಕೊಂಡಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾರತಕ್ಕೆ ಬಂದಿಳಿಯುತ್ತಿದ್ದಂತೆಯೇ ಕೋವಿಡ್​ ಪರೀಕ್ಷೆಗೆ ಒಳಗಾಗಬೇಕು ಹಾಗೂ ವರದಿ ಬರುವವರೆಗೂ ವಿಮಾನ ನಿಲ್ದಾಣದಲ್ಲೇ ಕಾಯಬೇಕು. ವರದಿ ನೆಗೆಟಿವ್​ ಬಂದರೂ ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ ನಲ್ಲಿ ಇರಿಸಲಾಗುತ್ತದೆ. ಎಂಟು ದಿನಗಳ ನಂತರ ಮತ್ತೆ ಪರೀಕ್ಷೆಗೆ ಒಳಗಾಗಬೇಕು. ಆಗ ಮತ್ತೆ ನೆಗೆಟಿವ್​ ಬಂದ ಮೇಲೂ ಮುಂದಿನ ಏಳು ದಿನಗಳವರೆಗೆ ನಿಗಾ ಇರಿಸಿಕೊಳ್ಳಬೇಕು ಎಂದು ಮಾರ್ಗಸೂಚಿ ತಿಳಿಸಿದೆ.

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!