Monday, August 8, 2022

ಎಲ್ಐಸಿಯ ಶೇ.25 ಪಾಲು ಮಾರಾಟಕ್ಕೆ ಕೇಂದ್ರ ಕ್ರಮ

Follow Us

newsics.com
ನವದೆಹಲಿ: ಭಾರತೀಯ ಜೀವ ವಿಮಾ ನಿಗಮದಲ್ಲಿನ (ಎಲ್ಐಸಿ) ಶೇ.25ರಷ್ಟು ಪಾಲನ್ನು ಮಾರಾಟ ಮಾಡುವ ಕೇಂದ್ರ ಸರ್ಕಾರದ ಯೋಜನೆಗೆ ಸಂಪುಟದಿಂದ ಅನುಮತಿ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಐಸಿ ಮಾರಾಟಕ್ಕೆ ಸಿದ್ಧವಾಗಲು ಕೇಂದ್ರದಿಂದ ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಕಾಯ್ದೆಗೆ ತಿದ್ದುಪಡಿ ತರಲು ಆಲೋಚಿಸಲಾಗುತ್ತಿದೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.
ಐಪಿಒ ಮೂಲಕವಾಗಿ ಕೇಂದ್ರ ಸರ್ಕಾರವು ಎಲ್ಐಸಿಯಲ್ಲಿನ ಷೇರಿನ ಪಾಲನ್ನು ಹಿಂತೆಗೆದುಕೊಳ್ಳಲಿದೆ ಎಂದು ಬಜೆಟ್ ಮಂಡನೆ ಮಾಡುವ ವೇಳೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.
ಸದ್ಯ ಎಲ್ಐಸಿಯಲ್ಲಿ ಸರ್ಕಾರದ ಪಾಲು ಶೇಕಡಾ ನೂರರಷ್ಟಿದೆ. ಮಾರುಕಟ್ಟೆ ಪರಿಸ್ಥಿತಿಯು ಐಪಿಒ ಸಮಯವನ್ನು ನಿರ್ಧರಿಸುತ್ತದೆ. ಹಂತ ಹಂತವಾಗಿ ಮಾರಾಟ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ತನ್ನ ಆದಾಯದ ಕೊರತೆ ತುಂಬಿಕೊಳ್ಳಲು ಐಪಿಒ ಮೂಲಕ ಎಲ್ಐಸಿ ಷೇರಿನ ಪಾಲನ್ನು ಮಾರಲು ಮುಂದಾಗಿದೆ ಎನ್ನಲಾಗಿದೆ.

ಉಪ ರಾಷ್ಟ್ರಪತಿಗೂ ಕೊರೋನಾ ಸೋಂಕು

ಬಾಬರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ರಾಜ್ಯಕ್ಕೆ ಮತ್ತೊಂದು ಚೀನಾ ವೈರಸ್; ಇಬ್ಬರಲ್ಲಿ ಸೋಂಕು ಪತ್ತೆ

ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!