newsics.com
ನವದೆಹಲಿ: ಸರ್ಕಾರದ ಹಿರಿಯ ಅಧಿಕಾರಿಗಳು ತಮ್ಮ ಅಧಿಕೃತ ಕರ್ತವ್ಯ ನಿರ್ವಹಣೆ ವೇಳೆ ರಹಸ್ಯ ಮಾಹಿತಿಗಳನ್ನು ವಾಟ್ಸಾಪ್ , ಟೆಲಿಗ್ರಾಂ ಮೂಲಕ ಹಂಚಿಕೊಳ್ಳದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಸಂಸ್ಥೆಗಳ ಸರ್ವರ್ ಗಳನ್ನು ವಿದೇಶಗಳಲ್ಲಿ ಖಾಸಗಿ ಸಂಸ್ಥೆಗಳು ನಿರ್ವಹಿಸುತ್ತಿವೆ. ಇದನ್ನು ಭಾರತ ವಿರೋಧಿ ಶಕ್ತಿಗಳು ದುರುಪಯೋಗ ಪಡಿಸುವ ಸಾಧ್ಯತೆ ಇದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಹೆಚ್ಚಿನ ಸಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸೂಚನೆ ನೀಡಿದೆ